ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ
ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು. ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…


