ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ
ತೀರ್ಥಹಳ್ಳಿ : ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.