ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…