Headlines

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್​ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ…

Read More