ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲಾ : ಸಚಿವ ಈಶ್ವರಪ್ಪ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ‘ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ವಾಟ್ಸ್ ಆ್ಯಪ್ ನಲ್ಲಿ ಟೈಪ್ ಮಾಡಿರುವ ಡೆತ್ ನೋಟ್ ಬಂದಿದೆ. ಆದರೆ ಸಹಿ ಮಾಡಿರುವ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ಆಗಿಲ್ಲ. ಆದ್ದರಿಂದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದರು. ನಾನು ಸಂತೋಷ್ ಮುಖವನ್ನೇ ನೋಡಿಲ್ಲ….