ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…