Headlines

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…

Read More

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ|Ripponpet

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ವಯೋಸಹಜ ಮೃತಪಟ್ಟಿದ್ದಾರೆ. ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ದಿವಂಗತ ಡಾ.ಅಬೂಬಕರ್ ರವರ ತಾಯಿಯಾದ ಖತೀಜಾಬಿ ರೆಹಮಾನ್ 2001 ರಲ್ಲಿ ಬರುವೆ 3 ವಾರ್ಡ್ ನ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿ ಗ್ರಾಪಂ ಉಪಾಧ್ಯಕ್ಷರಾಗಿದ್ದರು.2003 ರಲ್ಲಿ ಜೆಡಿಎಸ್ ಪಕ್ಷದಿಂದ ತಾಲೂಕ್ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು. ಮೃತರು ಏಳು ಜನ ಪುತ್ರರು ಹಾಗೂ…

Read More

ರಿಪ್ಪನ್ ಪೇಟೆ , ಸಿಂಗನ ಮನೆ ಹಾಗೂ ತುಮರಿ ಗ್ರಾಪಂ ನ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ :

ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗ್ರಾ.ಪಂ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ(ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ(ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ(ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ(ಸಾಮಾನ್ಯ ಅಭ್ಯರ್ಥಿ) ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಮಾಸಿಕ ಗೌರವ ಸಂಭಾವನೆ ರೂ.12,000 ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯ್ತಿ…

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More