ಪ್ರಧಾನಿ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :
ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…


