ರಿಪ್ಪನ್ ಪೇಟೆ : ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಿಪ್ಪನ್ ಪೇಟೆ : 2021-22 ನೇ ಸಾಲಿನಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2022 ರ ಅಡಿಯಲ್ಲಿ ಪ್ರಥಮ ಬಿಎ, ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್ ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದಿನ ವರ್ಷಗಳಲ್ಲಿ 700 ರೂ ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ ಗೆ ಏರಿಸಿರುವುದು ಖಂಡನಾರ್ಹ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ…


