Headlines

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ…

Read More

ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read More

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? | Ripponpete

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ. ರೋಗವು ತೀವ್ರಗತಿಯಲ್ಲಿ ಹಬ್ಬುತ್ತಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಳೆಯು ಜಿಲ್ಲೆಯನ್ನು ಪ್ರವೇಶಿಸಿ, ತಾಲೂಕಿನಾದ್ಯಂತ ಮಳೆ ಹಾಗೂ ಬಿಸಿಲಿನ ವಾತಾವರಣವಿದೆ. ಈ ಉಷ್ಣಾಂಶದಲ್ಲಿ ಸೊಳ್ಳೆಯ ಸಂತತಿ ವೃದ್ಧಿಯಾಗುವುದರಿಂದ ಡೆಂಗ್ಯೂ ರೋಗದ ಭೀತಿ ಜೋರಾಗಿದೆ. ಅಂದಾಜಿನ ಪ್ರಕಾರ ಪಟ್ಟಣದ ವ್ಯಾಪ್ತಿಯಲ್ಲಿ 10…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :

…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್‌ ಸರ್ಕಲ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…

Read More