ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ
ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…