Headlines

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ  ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ  ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.  ಈ ಸಂಧರ್ಭದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…

Read More

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ನಮ್ಮ ಅವಧಿಯಲ್ಲಿನ ಅಭಿವೃದ್ದಿಯನ್ನು ಸಹಿಸದೇ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಯಾವ ವ್ಯಕ್ತಿಗೂ ಅವಹೇಳಕಾರಿಯಾಗಿ ಬೈದಿಲ್ಲ. ದುರುದ್ದೇಶದಿಂದ ನನ್ನ ತೇಜೋವಧೆ ಮಾಡುವ ಉದ್ದೇಶದಿಂದಾಗಿ ಇಲ್ಲ ಸಲ್ಲದ ಆರೋಪ ಮಾಡಿ ಸಾಮಾನ್ಯ ಸಭೆಯನ್ನು ನಡೆಸಲು ಬಿಡದೇ ಏಕಾಏಕಿ ಪ್ರತಿಭಟನೆ ನಡೆಸಿ ನನ್ನ ವಿರುದ್ದ ಧಿಕ್ಕಾರ ಕೂಗಿ ಹೊರ ನಡೆದಿರುವುದರ ಬಗ್ಗೆ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ದಿಢೀರ್ ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ನನಗೂ ಆಡಿಯೋದಲ್ಲಿ…

Read More