Headlines

ಗರ್ತಿಕೆರೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ : ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿ ವೀಕ್ಷಿಸಿ👇|cctv

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಕಾರು ಹಾಗು ಬೈಕ್ ನಡುವೆ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಗರ್ತಿಕೆರೆ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ಚಾಲಕನ ಅಜಾಗರೂಕತೆಯಿಂದ ಹಿಂಬದಿ ಗಮನಿಸದೆ ಬಲಕ್ಕೆ ತಿರುಗಿಸಿದ್ದಾನೆ ಆ ಸಂಧರ್ಭದಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕ್ ನ್ನು ತಪ್ಪಿಸಲು ಬಲಕ್ಕೆ ತಿರುಗಿಸಿದ್ದರೂ ಬೈಕ್ ಗೆ ಕಾರು ತಗುಲಿದ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…

Read More

ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP

ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…

Read More

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು ಶಿವಮೊಗ್ಗ | ಶಾಲಾ (school) ಬಾಲಕನಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ನಡೆದಿದೆ. ನಗರದ ಮಲವಗೊಪ್ಪದಲ್ಲಿ ಚಿರಂತ್ ಎಂಬ ಬಾಲಕ ಖಾಸಗಿ ಶಾಲೆಗೆ ಹೋಗಲು ನಿಗದಿತ ನಿಲ್ದಾಣದ ಕಡೆ ಸಾಗುತ್ತಿದ್ದ ವೇಳೆ ಭದ್ರಾವತಿಯಿಂದ ಬಂದ ಬೈಕ್ ಡಿಕ್ಕಿಹೊಡೆದಿದೆ. ತಕ್ಷಣವೇ ಆತನನ್ನ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಬಾಲಕ ಮಾರ್ಗ ಮಧ್ಯೆಯಲ್ಲಿ ಅಸುನೀಗಿದ್ದಾನೆ. ಶಿವಮೊಗ್ಗದಲ್ಲಿರುವ…

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ರಿಪ್ಪನ್ ಪೇಟೆ : ಜೇನಿ ಗ್ರಾಪಂ ಮಾಜಿ ಸದಸ್ಯರಾದ ಹೊ ಮ ಲೋಕಪ್ಪ ಗೌಡ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಕೋಟೆತಾರಿಗ ನಿವಾಸಿ ಜೇನಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಹೊ ಮ ಲೋಕಪ್ಪಗೌಡ ರವರು ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಸುಮಾರು 15 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಮೃತರು ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಜೇನಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ…

Read More

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ರಿಪ್ಪನ್ ಪೇಟೆ : ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು.  ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು.     ರಿಪ್ಪನ್ ಪೇಟೆಯಲ್ಲಿ ಮಳೆ ಹಿನ್ನಲೆಯಲ್ಲಿ  ಮೆರವಣಿಗೆಯನ್ನು ಸ್ಥಗಿತಗೊಳಿಸಿ ಗುಂಪು…

Read More