Headlines

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident

ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್‌ ಟ್ಯಾಂಕರ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು,  ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ ರಿಪ್ಪನ್‌ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್‌ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು…

Read More

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…

Read More

ಶಿವಮೊಗ್ಗದ ಕವಯತ್ರಿ ಕುಮಾರಿ ನಿತ್ಯಶ್ರೀ ಗೆ ರಾಜ್ಯೋತ್ಸವ ಪ್ರಶಸ್ತಿ : ಸತತ ಮೂರು ಪ್ರಶಸ್ತಿ ಮುಡಿಗೇರಿಸಿಕೊಂಡ ಯುವ ಬರಹಗಾರ್ತಿ

ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ  ಕಸ್ತೂರಿ ಸಿರಿಗನ್ನಡ ವೇದಿಕೆಯ  ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು  ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಹಾಗೂ ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ಸತತ ಮೂರು…

Read More