ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ: ಲಕ್ಷಣ ಸವದಿ
ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ…


