ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ
ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…