ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?
ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು. ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…