ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ :
ಶಿವಮೊಗ್ಗ: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ನೆಹರೂಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಜಯನಗರ ಪೊಲೀಸ್ ಠಾಣೆಗೆ ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದರು. ಪೊಲೀಸರು ಒಂದು ಗಂಟೆ ಖಾಕಿ ಕಳಚಿ ಮನೆ ಸೇರಿಕೊಂಡರೆ ನಿಮ್ಮ ಸಚಿವ ಸ್ಥಾನವೂ ಇರುವುದಿಲ್ಲ. ಸರ್ಕಾರವೂ ಇರುವುದಿಲ್ಲ. ಒಳ್ಳೆಯವರು,ಕೆಟ್ಟವರು ಎಲ್ಲಾ ಇಲಾಖೆಯಲ್ಲೂ ಇದ್ದಾರೆ ಎಂದರು. ಪ್ರತಿಭಟನೆಗೆ ಕರುನಾಡ ಯುವ ಶಕ್ತಿ ಸಂಘಟನೆ ಬೆಂಬಲ ನೀಡಿತ್ತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆ…