ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.
ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…


