ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :
ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…


