ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ…

Read More

ನಾಳೆ(09-12-2022) ಸಂಜೆ 7 ರಿಂದ 12 ಗಂಟೆ ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್ – ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಪ್ರಕಟಣೆ|Ripponpet

ರಿಪ್ಪನ್‌ಪೇಟೆ : ಕುಂಸಿ – ಆನಂದಪುರ ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂ 92 ರಲ್ಲಿ ತಾಂತ್ರಿಕ ಪರಿಶೀಲನೆ ಇರುವುದರಿಂದ 12 ಗಂಟೆಗಳ ಕಾಲ ರಿಪ್ಪನ್‌ಪೇಟೆ ಯಿಂದ ಆಯನೂರು ಮಾರ್ಗ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ರೈಲ್ವೆ ಗೇಟ್ ಸಂಖ್ಯೆ 92 ರಲ್ಲಿ (ಆರಸಾಳು ಗ್ರಾಮದಲ್ಲಿರುವ ರೈಲ್ವೆ ಗೇಟ್) ತಾಂತ್ರಿಕವಾಗಿ ಪರಿಶೀಲನೆ ಮಾಡಲು ದಿನಾಂಕ 09-12-22ರ ಸಂಜೆ 7:೦೦ ಗಂಟೆಯಿಂದ 10-12-22ರ ಬೆಳಿಗ್ಗೆ 7:೦೦ ಗಂಟೆಯವರೆಗೆ ಗೇಟನ್ನು ಮುಚ್ಚುವುದರಿಂದ ತಾತ್ಕಾಲಿಕ  ಪರ್ಯಾಯ ಮಾರ್ಗಗಳು…

Read More

ರಿಪ್ಪನ್ ಪೇಟೆ ಯಲ್ಲಿ ಶುಕ್ರವಾರ ಡಾ. ಶಿವಕುಮಾರ ಮಹಾಸ್ವಾಮಿಗಳವರ 115ನೇ ವರ್ಷದ ಜನ್ಮದಿನಾಚರಣೆ:

ರಿಪ್ಪನ್ ಪೇಟೆ : ನಡೆದಾಡುವ ದೇವರು ತ್ರಿವಿಧ ದಾಸೋಹಿ,ಶತಾಯುಷಿ,ಕಾಯಕಯೋಗಿ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು 115ನೇ ವರ್ಷದ ಜನ್ಮದಿನಾಚರಣೆಯನ್ನು  ಏಪ್ರಿಲ್ 1 ಶುಕ್ರವಾರದಂದು  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿ ಗಳವರ ಭಕ್ತ ವೃಂದದವರು ತಿಳಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಕಗ್ಗಲಿ ಲಿಂಗಪ್ಪ ಮಾತನಾಡಿ ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾಕ್ಟರ್ ಶಿವಕುಮಾರ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ – ಮಧು ಬಂಗಾರಪ್ಪ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ‌ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು ಹಾಗೂ ಸೊರಬ ವಿಧಾನಸಭಾ ಅಭ್ಯರ್ಥಿಯಾದ ಮಧುಬಂಗಾರಪ್ಪ ಹೇಳಿದರು. ಅವರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಪುರ ಸಮೀಪದ ಕಗ್ಗಲಿಜಡ್ಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಶರಾವತಿ ಮುಳುಗಡೆಯಾಗಿ ಅಲ್ಲಿನ ರೈತರು ಮನೆಮಠವನ್ನು ಕಳೆದು ಕೊಂಡ ಸಂತ್ರಸ್ಥರು ಹೆಚ್ಚು ಹೊಸನಗರ…

Read More

ಪತ್ರಕರ್ತರಿಗೆ ಕಿರುಕುಳ – ದಾವಣಗೆರೆ ಎಸ್ ಪಿ ರಿಷ್ಯಂತ್ ಮೇಲೆ ಕ್ರಮ ಕೈಗೊಳ್ಳುವಂತೆ ರಿಪ್ಪನ್‌ಪೇಟೆ ಪತ್ರಕರ್ತರಿಂದ ಒತ್ತಾಯ|Rpet

ರಿಪ್ಪನ್‌ಪೇಟೆ : ಫೆಬ್ರವರಿ 27 ರಂದು ಸೋಗಾನೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಹಿರಿಯ ಪತ್ರಕರ್ತ ಆರ್‌.ಎಸ್‌. ಹಾಲಸ್ವಾಮಿ (ಟಿವಿ ಭಾರತ್) ಅವರನ್ನು ಅಕ್ರಮವಾಗಿ ಪೊಲೀಸ್ ವಾಹನದಲ್ಲಿ ಕೂಡಿಟ್ಟು ಉದ್ದಟತನದಿಂದ ವರ್ತಿಸಿದ ದಾವಣೆಗೆರೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ಅಮಾನತ್ತಿನಲ್ಲಿಡುವಂತೆ ಒತ್ತಾಯಿಸಿ ಶನಿವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಗೃಹ ಸಚಿವರಿಗೆ ರಾಜಸ್ವ ನಿರೀಕ್ಷಕರಾದ ಅಫ಼್ರೋಜ್ ರವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More