Headlines

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಧಾನವಾಗುತ್ತದೆ: ಬೇಳೂರು ಗೋಪಾಲಕೃಷ್ಣ

ಗಡಿಕಟ್ಟೆ: ಕಷ್ಟ ಎಲ್ಲಾರಿಗೂ ಇರುತ್ತದೆ ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಾಧಾನವಾಗುತ್ತದೆ ಎಂದು ಮಾಜಿ ಶಾಸಕರೂ,ಕೆ.ಪಿ.ಸಿ.ಸಿ. ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಗಡಿಕಟ್ಟೆಯ ಹಾವುಗೊಲ್ಲರ ಸುಮಾರು 50 ಕುಟುಂಬದ ಸದಸ್ಯರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರ ಇಂತಹವರನ್ನು ನಿರ್ಲಕ್ಷಿಸಿರುವುದು ಖಂಡನೀಯ, ನಿಮ್ಮ ಸಂಕಷ್ಟದ ಜೊತೆ ಗೋಪಾಲಕೃಷ್ಣ ಬೇಳೂರು ಸದಾ ಇರುತ್ತಾರೆ ಎಂದರು.    ಈ ಸಂದರ್ಭದಲ್ಲಿ ರಂಜಿತ ರಾಧಾ ಗೋಪಾಲ ಕೃಷ್ಣ ಬೇಳೂರು, ತಾಲ್ಲೂಕು…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರ ಬಂಧನ :

ಶಿವಮೊಗ್ಗ : ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್ ಎಂಎಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ….

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ…

Read More

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…

Read More

ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ | Thirthahalli

ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ  ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಪಕ್ಕದಲ್ಲಿ ಇದ್ದ ಕಾರು(car) ಜಖಂಗೊಂಡ ಘಟನೆ ನಡೆದಿದೆ. ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಕಾಂಗ್ರೆಸ್ ಕಚೇರಿ ಪಕ್ಕದಲ್ಲಿ ಇರುವಂತಹ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪಕ್ಕದಲ್ಲಿ ಇದ್ದಂತಹ ಭಾರಿ ಹಳೆಯ ಗೋಳಿ ಮರವೊಂದು ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿನ ಮೇಲೆ ಬಿದ್ದ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More
Exit mobile version