ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::
ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ…