ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:
ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…