ಹಿರೇಮನೆ ಗಿರಿಜನ ಆಶ್ರಮ ಶಾಲೆ ಹೆಸರು ಬದಲಾವಣೆಗೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ವಿರೋಧ
ಸಾಗರ :ತಾಲ್ಲೂಕಿನ ತಾಳಗುಪ್ಪ ಹೋಬಳಿ ಹಿರೇಮನೆಯಲ್ಲಿ 50 ವರ್ಷಗಳ ಹಿಂದೆ ಪ್ರಾರಂಭಗೊಂಡ ಮಹಾತ್ಮಾಗಾಂಧಿ ಗಿರಿಜನ ಆಶ್ರಮ ಶಾಲೆ ಈ ಹೆಸರನ್ನು ಸರ್ಕಾರ ಏಕಾಏಕಿ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಇಂದು ಸಾಗರ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು. ಸರ್ಕಾರದ ಈ ನೀತಿಯನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ…