ಶಿವಮೊಗ್ಗಜಿಲ್ಲೆಯ ನೂತನ ಮಂತ್ರಿಗಳಿಗೆ ಶ್ರೀ ರೇಣುಕಾನಂದ ಸ್ವಾಮೀಜಿಗಳಿಂದ ಅಭಿನಂದನೆ.
ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಕೆಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ರವರನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ. ರಿಪ್ಪನ್ ಪೇಟೆ ಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸರಳ ಸಜ್ಜನಿಕೆಯ ವ್ಯಕ್ತಿತ್ವ ಜನನಾಯಕ ಆರಗ ಜ್ಞಾನೇಂದ್ರ ರವರಿಗೆ ರಾಜ್ಯದ ಗೃಹ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವುದು ಸಂತೋಷವಾಗಿದೆ. …


