ಕುಟುಂಬದವರೊಂದಿಗೆ ಆಗಮಿಸಿ‌ ಮತ ಚಲಾಯಿಸಿದ ಶಾಸಕ ಹರತಾಳು ಹಾಲಪ್ಪ|election

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ…

Read More

ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More

ರಿಪ್ಪನ್‌ಪೇಟೆ : ಸುತ್ತಮುತ್ತಲಿನ ಸಾರ್ವಜನಿಕ ಗಣಪತಿ ವಿಸರ್ಜನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಾದ ಕೊಳವಂಕ, ಕಲ್ಲುಹಳ್ಳ, ಬಸವಾಪುರ, ಕಳಸೆ, ಸೂಡೂರು ಕೋಣನಜಡ್ಡು, ಹಾರೋಹಿತ್ತಲು,ದೂನ ,ಬೆನವಳ್ಳಿ ಮತ್ತು ಜೀರಿಗೆಮನೆ,ಗ್ರಾಮದಲ್ಲಿ ಯುವಕ ಸಂಘಗಳು  ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣಪತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ  ರಾಜಬೀದಿ ಉತ್ಸವದಲ್ಲಿ ಕೊಂಡೊಯ್ದು ವಿಸರ್ಜನೆ ಮಾಡಿದರು. ಉತ್ಸವಮೂರ್ತಿ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸ್ಥಳೀಯ ಜನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ನೀಡಿತು  ಡೊಳ್ಳು ಕುಣಿತದ ತಾಳಕ್ಕೆ ತಕ್ಕಂತೆ ಯುವಕ ಯುವತಿಯರು ಚಿಣ್ಣರು ಹಾಗೂ ಹೆಂಗಳೆಯರು ಹೆಜ್ಜೆ ಹಾಕಿದರು. ಸಂಪೂರ್ಣ ವೀಡಿಯೋ ಇಲ್ಲಿ…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್‌ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ  ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.  ಮನವಿ ಸ್ವೀಕರಿಸಿದ ಶಾಸಕರು…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ, ಆಗಸ್ಟ್ 14,: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ  ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in  ರಲ್ಲಿ ಸೆ.12ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ…

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More