Headlines

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ನೆಟ್ ವರ್ಕ್ ಅರಸುತ್ತಾ ಮನೆ ಬಿಟ್ಟಿದ್ದ ಯುವತಿಯ ಮೊಬೈಲ್ ಕಳ್ಳತನ !!!

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ಕೊರತೆಯಿಂದ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಡುವೆ ಮಲೆನಾಡಿನ ಮಹಿಳೆಯರು ಹೊಸದೊಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ನೆಟ್ವರ್ಕ್ ಸಮಸ್ಯೆ. ತುಮರಿ ಗ್ರಾಪಂ ವ್ಯಾಪ್ತಿಯ ಮಾರಲಗೋಡು ಗ್ರಾಮದ ಯುವತಿ ಆನ್ ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಅನ್ನು ಅವಲಂಬಿಸಿದ್ದಳು.ಗ್ರಾಮದಲ್ಲಿ ಇಂಟರ್ನೆಟ್ ಸಂಪರ್ಕದ ಸಮಸ್ಯೆಯಿಂದಾಗಿ ತರಗತಿಗಳಿಗೆ ಹಾಜರಾಗುವುದೇ ದುಸ್ತರವಾಗಿತ್ತು. ಹೀಗಾಗಿ ಇಂಟರ್ನೆಟ್ ಸಂಪರ್ಕ ಸಿಗುವ ಪ್ರದೇಶಕ್ಕಾಗಿ ಮನೆಯಿಂದ ಹೊರಗೆ ಹುಡುಕಬೇಕಾಗಿದ್ದಿತು. ಈ ವೇಳೆ ಯುವತಿಯನ್ನು ಓರ್ವ ಯುವಕ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಹೊಂಚು ಹಾಕಿ…

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More
Exit mobile version