SSLC ವಿಧ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಉಚಿತ ಬಸ್ ವ್ಯವಸ್ಥೆ: ಕೆ ಎಸ್ ಆರ್ ಟಿ ಸಿ & ಬಿಎಂಟಿಸಿ ಯಿಂದ ಅದೇಶ
ಬೆಂಗಳೂರು: ಇದೇ ತಿಂಗಳ 19 ಹಾಗೂ 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು…