Headlines

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

ಹೊಸನಗರ ಜೆಸಿಐ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ “ಹೇರ್ ಡೊನೇಷನ್” ಕಾರ್ಯಕ್ರಮ

ಹೊಸನಗರ:- ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜೆಸಿಐ ಹೊಸನಗರ ಕೊಡಚಾದ್ರಿಯ ಅಧ್ಯಕ್ಷರು ಸೀಮಾಕಿರಣ್ ಸೆರಾವ್ ರವರ ನೇತೃತ್ವದಲ್ಲಿ ಹೇರ್ ಡೊನೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜೆಸಿಐ ಹೊಸನಗರ ಕೊಡಚಾದ್ರಿ, ಜೆಸಿ ಸದಸ್ಯರು ಮತ್ತು ಪದಾಧಿಕಾರಿಗಳು ಮತ್ತು ಕುಟುಂಬದವರು ಮತ್ತು ಬೆಂಗಳೂರಿನಿಂದ ಹೇರ್ ಡೋನೆಷನ್ ಟ್ರಸ್ಟ್ ನವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಡಾ!ಚಡಗ ಕಾಂಪ್ಲೆಕ್ಸ್ ಸಿಯಂಟೋ ಬ್ಯೂಟಿ ಸಲೂನ್ ನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಜೆಸಿಐ ಕೊಡಚಾದ್ರಿ ಹೊಸನಗರ ಅಧ್ಯಕ್ಷರಾದ ಸೀಮಾ ಕಿರಣ್ ಮತ್ತು ಅವರ ಮಗಳಾದ ಅರ್ಚನಾ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

ಮನೆ ಮಾರಾಟ ಮಾಡಿ ನಂತರ ನಕಲಿ ದಾಖಲೆ ಎಂದು ಪೊಲೀಸರಿಗೆ ಯಾಮಾರಿಸುತ್ತಿರುವ ಮನೆ ಒಡತಿ :

ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ. ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ  ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…

Read More

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಪ್ರಮೀಳಾ ಲಕ್ಷ್ಮಣಗೌಡ ಪದವಿ ಸ್ವೀಕಾರ

ರಿಪ್ಪನ್‌ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಜೀವನ ಸಾಗಿಸುತ್ತಿರುವ ಇಂದಿನ ನಾಗರಿಕರಿಗೆ  ಮಾನಸಿಕ ನೆಮ್ಮದಿ ಅತ್ಯಂತ ಅಗತ್ಯವಾದ ಸಂಗತಿಯಾಗಿದೆ. ಮಾನವ ಸಮಾಜ ಸೇವೆಯಲ್ಲಿ ಪಡೆದುಕೊಂಡಾಗ ಮಾತ್ರ ನೆಮ್ಮದಿಯನ್ನು ಕಾಣಬಹುದು ಎಂದು ರೋಟರಿ ಸಂಸ್ಥೆಯ ಮಾಜಿ ಗವರ್ನರ್ ರೊಟೇರಿಯನ್ ಎಚ್ ಎಲ್ ರವಿ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ವಿಶ್ವಮಾನವ ಸಮುದಾಯಭವನದಲ್ಲಿ ಅಯೋಜಿಸಲಾಗಿದ್ದ ರೋಟರಿ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ  ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಜಗತ್ತಿನಲ್ಲಿ…

Read More
Exit mobile version