ರಿಪ್ಪನ್ ಪೇಟೆ : ಕಟ್ಟುಕೋವಿಯಿಂದ ಕಾಲು ಕಳೆದುಕೊಂಡ ಯುವಕನ ಸಂಕಷ್ಟ ಕೇಳುವವರಾರು !!??
ರಿಪ್ಪನ್ ಪೇಟೆ : ತನ್ನದಲ್ಲದ ತಪ್ಪಿಗೆ ಕಾಲನ್ನು ಕಳೆದುಕೊಂಡು ಸಂಕಷ್ಟಕೊಳಗಾಗಿರುವ ಯುವಕನ ಗೋಳು ಕೇಳುವರಿಲ್ಲದೇ ಪರಿತಪಿಸುತ್ತಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯತಿಯ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ (26) ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಈಗ ಕಾಲು ಕಳೆದುಕೊಂಡು ಸಂಕಷ್ಟಕ್ಕೊಳಗಾಗಿ ಜೀವನ ಪರಿಹಾರಕ್ಕಾಗಿ ಬೇರೆಯವರಲ್ಲಿ ಕೈಚಾಚುವ ಪರಿಸ್ಥಿತಿ ಬಂದೊದಗಿದೆ. ಬಡ ಕುಟುಂಬಕ್ಕೆ ಆಸರೆಯಾಗಿದ್ದ ಗಂಡ ಹಾಗೂ…