Headlines

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ|volleyball

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ….

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

ತೀರ್ಥಹಳ್ಳಿ :ಸರ್ಕಾರದ ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ : ತಹಸೀಲ್ದಾರ್ ಡಾ. ಶ್ರೀಪಾದ್

ತೀರ್ಥಹಳ್ಳಿ : ಕೊರೊನಾ ಸೋಂಕಿನ ಸಂದರ್ಭದಲ್ಲಿ  ಗಣೇಶೋತ್ಸವ ಆಚರಣೆ ಅತ್ಯಂತ ಸರಳವಾಗಿ ಶ್ರದ್ಧಾ ಭಕ್ತಿ ಭಾವದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಸರ್ಕಾರದ ಎಲ್ಲಾ ಮಾನದಂಡ ಮತ್ತು.ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ ಎಂದು ತೀರ್ಥಹಳ್ಳಿ  ತಹಶೀಲ್ದಾರ್‌ ಡಾ. ಶ್ರೀಪಾದರವರು ಗಣೇಶೋತ್ಸವ ಆಚರಣೆ ಮಾಡುವ ಸಮಿತಿಯವರಿಗೆ ಸೂಚನೆ ನೀಡಿದರು. ಇಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಕರೆಯಲಾಗಿದ್ದ ಗಣೇಶೋತ್ಸವ ಆಚರಣೆಯ ಕುರಿತಾದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕೊರೊನ…

Read More