ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ ಹೊಂದಿದ್ದರೂ ಭಾರತದ ಜನತೆಗೆ ಮೂಲ ಸೌಕರ್ಯಗಳಿಲ್ಲದೇ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿತ್ತು ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ನೆಹರು ಮೈದಾನದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಮತ್ತು ಭಾರತೀಯರು ಬ್ರಿಟಿಷ್ ಆಡಳಿತದ…