Headlines

ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ  ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…

Read More

ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft

ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಹಲವರ ನಾಮಪತ್ರ ಸಲ್ಲಿಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘ (ರಿ) ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಹಲವು ನಾಮಪತ್ರ ಸಲ್ಲಿಕೆಯಾಯಿತು. ಸೆಪ್ಟೆಂಬರ್ 04 ರಂದು ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು 15 ಕ್ಷೇತ್ರದಲ್ಲಿ ಚುನಾವಣೆಗೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದೆ. ರಿಪ್ಪನ್‌ಪೇಟೆ ಮತಕ್ಷೇತ್ರ ವ್ಯಾಪ್ತಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮಾಜಿ‌ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗೆ ದುಡಿಯುವ ಹಂಬಲದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.ಸಮಾಜದ ಎಲ್ಲಾ ಬಾಂಧವರು ನನ್ನನ್ನು ಬೆಂಬಲಿಸುವ ಮೂಲಕ…

Read More

ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಆಯನೂರು ಸಮೀಪದ ಚೋರಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ

ಆಯನೂರು ಸಮೀಪದ ಚೋರಡಿಯಲ್ಲಿ ಇಬ್ಬರು ಮಕ್ಕಳಿಗೆ ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಯಿ‌ ಜ್ಯೋತಿ (25) ಮಕ್ಕಳಾದ ಎರಡುವರೆ ವರ್ಷದ ಸಾನ್ವಿ ಹಾಗೂ ಒಂದು ವರ್ಷದ ಕುಶಾಲ್‌ನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ. ನೇಣಿಗೆ  ಕೌಟುಂಬಿಕ ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ. ಇನ್ನು ಕೆಲವರು ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿದ್ದ ಶಿವಕುಮಾರ್ ಪತ್ನಿ ಜ್ಯೋತಿ(25) ಎರಡು ವರೆ ವರ್ಷದ ಸಾನ್ವಿ,…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More