Headlines

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ  ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ಅಧ್ಯಕ್ಷರ ರಾಜಿನಾಮೆ ಪ್ರಹಸನದಿಂದ ಹುಂಚಾ ಸೊಸೈಟಿಗೆ ಬಿತ್ತು ಎರಡು ಲಕ್ಷ ಬಡ್ಡಿ…..!!! ಕಟ್ಟೋದ್ಯಾರು ಆಡಳಿತ ಮಂಡಳಿನಾ ?? ರೈತರಿಗೆ ಗುನ್ನಾನಾ???ಹುಂಚಾ ಸೊಸೈಟಿಯಲ್ಲಿ ಬಗೆಹರಿಯದ ಗೊಂದಲ!!!!!!

ಹುಂಚ : ಇತ್ತೀಚೆಗೆ ಹುಂಚಾ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ಪ್ರಹಸನ ಸುಖಾಂತ್ಯವಾಯಿತು ಎನ್ನುವ ಮೊದಲು ಡಿಸಿಸಿ ಬ್ಯಾಂಕ್ ಈಗ ಸುಸ್ತಿದಾರ ಸೊಸೈಟಿ ಎಂದು ಘೋಷಿಸಿ ಎರಡು ಲಕ್ಷಕ್ಕೂ ಹೆಚ್ಚು ಬಡ್ಡಿ ವಿಧಿಸಿದ್ದಾರೆಂದು ತಿಳಿದು ಬಂದಿದೆ. ಹುಂಚಾ ವ್ಯವಸಾಯ ಸಹಕಾರಿಯ ಆಡಿಟ್ ವರದಿಯಲ್ಲಿ ಐವತ್ತು ಲಕ್ಷಕ್ಕೂ ಹೆಚ್ಚೂ ವ್ಯತ್ಯಾಸವಾಗಿದೆ ಎಂಬ ಸುದ್ದಿಗೆ ಬೆದರಿ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ನೀಡಿದ್ದರು . ಉಳಿದ ನಿರ್ದೇಶಕರು ಎದ್ದು ಬಿದ್ದು ಆಡಿಟರ್ ರಿಂದ…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More

ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!

ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು. 2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ…

Read More