Headlines

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

ಮಲೆನಾಡಿನಲ್ಲಿ ಸ್ಯಾಟಲೈಟ್ ಪೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ : ಆರಗ ಜ್ಞಾನೇಂದ್ರ

ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ. “ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ…

Read More

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More

ಹೊಸನಗರದಲ್ಲಿ ಈಡಿಗ ಸಮುದಾಯದ ಬಹುದಿನಗಳ ಕನಸು ನನಸು: ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಡಿ.26ರಂದು ಶಂಕುಸ್ಥಾಪನೆ

The long-held dream of the Ediga community in Hosanagara is coming true: Foundation stone for the student hostel building to be laid on December 26th ಹೊಸನಗರದಲ್ಲಿ ಈಡಿಗ ಸಮುದಾಯದ ಬಹುದಿನಗಳ ಕನಸು ನನಸು: ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಡಿ.26ರಂದು ಶಂಕುಸ್ಥಾಪನೆ The long-held dream of the Ediga community in Hosanagara is coming true: Foundation stone for the student hostel building…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್‌ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

ಮನೆಯ ಕೊಟ್ಟಿಗೆಯಲ್ಲಿ ಅಡಗಿ‌ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard

ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.  ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.  ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ.  ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.  ಕಾರ್ಯಾಚರಣೆಯಲ್ಲಿ…

Read More

ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಬಂಧನ|arrested

ಕೊಲ್ಲೂರು‌ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ  ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ತಿಳಿದುಬಂದಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್​ನ್ನು ಆರೋಪಿ ಕಳವು ಮಾಡಿದ್ದನು. ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು.   ಈ ಪ್ರಕರಣ ಸಂಬಂಧ ಆರೋಪಿಯನ್ನ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ಧಾರೆ. ಆರೋಪಿ ತೀರ್ಥಹಳ್ಳಿಯ ಕಂಧಕ ಗ್ರಾಮದ ನಿವಾಸಿಯಾಗಿದ್ಧಾನೆ. ಈತನ  ಬಳಿಯಿಂದ 4,75,000 ರೂ. ಮೌಲ್ಯದ 108…

Read More

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್  ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…

Read More
Exit mobile version