Headlines

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ  ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ  ಗ್ರಾಮೀಣ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು ಶಿವಮೊಗ್ಗ : ಮೊಬೈಲ್‌ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi

ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident

ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್‌ ಟ್ಯಾಂಕರ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು,  ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…

Read More
Exit mobile version