Headlines

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ‌ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…

Read More

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯ ಥರ್ಡ್ ವೇವ್ ಕೆಫೆಯಲ್ಲಿ ಈ ಘಟನೆ ನಡೆದಿದೆ. ಕೆಫೆಯಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ ತನ್ನ ಮೊಬೈಲ್ ನ್ನು ಫ್ಲೈಟ್ ಮೋಡ್ ನಲ್ಲಿ…

Read More

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read More

ವಿಶ್ವ ಪಶುವೈದ್ಯಕೀಯ ದಿನಾಚರಣೆ :

ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಶನಿವಾರ ಸರ್ಕಾರಿ ನೌಕರರ ಸಭಾ ಭವನದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆ ಹಾಗೂ ಡಾ| ಗೊಯಲ್ ವೆಟ್ ಫಾರ್ಮ ವೆಟರ್ನರಿ ಇನ್ ಹೋಮಿಯೋಪತಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು  ಹಾಗೂ ಜಿಲ್ಲೆಯ ಪಶುವೈದ್ಯರಿಗೆ ಜಿಲ್ಲಾ ಮಟ್ಟದ ತಾಂತ್ರಿಕ…

Read More

ಕಾರು ಡಿಕ್ಕಿಯಾಗಿ ಪಾದಚಾರಿ ಸಾವು – ಚಾಲಕ ಪರಾರಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಅಂಡ್ ರನ್‌ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಶಿವಕುಮಾರ್‌ ಅವರು ಆನಂದಪುರದಿಂದ ಹೊರಟು ಯಡೆಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್‌ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು….

Read More

ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…

Read More

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ  ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…

Read More

ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್‌ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…

Read More

2 ಕೆಜಿ ಗಾಂಜಾ ಸಹಿತ ಆರೋಪಿಗಳು ಅರೆಸ್ಟ್! ಗಡಿಪಾರಾದ ರೌಡಿಶೀಟರ್ ನಿಂದ ಆಂಧ್ರದ ಗಾಂಜಾ ಜಿಲ್ಲಾದ್ಯಂತ ಸಪ್ಲೈ..!!???

ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್​ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ.  ಶಿವಮೊಗ್ಗ ನಗರದ ಎಂ.ಆರ್.ಎಸ್. ನಿಂದ  ವಡ್ಡಿನಕೊಪ್ಪದ ಕಡೆಗೆ ಹೋಗುವ ರಸ್ತೆಯ  ಸಮೀಪ ಇರುವ ಕೆಇಬಿ ಖಾಲಿ ಜಾಗದಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ  ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ  ಪ್ರಭು ಡಿ.ಟಿ ನೇತ್ರತ್ವದಲ್ಲಿ ಸಿಇಎನ್ ಕ್ರೈಂ ಪೊಲೀಸ್ ಠಾಣೆ ದೀಪಕ್, ಎಂ.ಎಸ್ ಟೀಂ …

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More