Headlines

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್‌ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು  ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್‌ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು…

Read More

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ  ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್‌ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More
Exit mobile version