
ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…