ಶಿಗ್ಗಾಂವಿಯಲ್ಲಿ ಬಂಡಾಯ ಶಮನ | ಅ.30ರಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ : ಡಿ ಕೆ ಶಿ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅ.30ರಂದು ಬುಧವಾರ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಖಾದ್ರಿ ನಮ್ಮ ಜೊತೆಯಲ್ಲಿದ್ದಾರೆ….

Read More

ಸಿಎಂ ಸಿದ್ದರಾಮಯ್ಯ ಮನವೊಲಿಕೆಗೂ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!

ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ! ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ (Shiggaon) ಕಾಂಗ್ರೆಸ್ (Congress) ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಯಶಸ್ವಿಯಾಗಿದ್ದಾರೆ ಎಂದು…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More