
ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು
ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.