
ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ
ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…