ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ
ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…