ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ
ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….