Headlines

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…

Read More