ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read More

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ  ಪ್ರಶಾಂತ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ವರ್ಷದ ಹಿಂದೆ ಪತ್ನಿಯಿಂದ ವಿಚ್ಚೆದನವಾಗಿತ್ತು ಎನ್ನಲಾಗುತ್ತಿದೆ.

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More