
20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ
20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…


