ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು
ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….