
ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!
ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…